ಬೆಂಗಳೂರು:ನಾಡಿನ ಖ್ಯಾತ ಸಂಶೋದಕ,ನಿಘಂಟು ತಜ್ಞ ಫ್ರೊ.ಜಿ.ವೆಂಕಟಸುಬ್ಬಯ್ಯ ಅವರು ನಿಧನರಾಗಿದ್ದು ನಾಡಿನ ಗಣ್ಯಾತಿಗಣ್ಯರು ಕಂಬನಿ ಮಿಡಿದಿದ್ದಾರೆ. ಪ್ರೊ.ವೆಂಕಟಸುಬ್ಬಯ್ಯರ ನಿಧನದಿಂದ ಕನ್ನಡ ಸಾರಸ್ವತ ಲೋಕ ಮಹಾನ್ ಚೇತನವನ್ನು ಕಳೆದುಕೊಂಡಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಕೆ. ೫೦ ಪುಸ್ತಕಗಳನ್ನು, ೧೪ ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದರು ಎಂದು ಅವರು ಬಣ್ಣಿಸಿದ್ದಾರೆ.
ಜಿ.ವಿ. ಎಂದೇ ಖ್ಯಾತರಾದ ಪ್ರೊ|| ಜಿ. ವೆಂಕಟಸುಬ್ಬಯ್ಯ ಅವರು ಅತ್ಯುತ್ತಮ ಭಾಷಣಕಾರರು ಹಾಗೂ ಸರಳ ಸಜ್ಜನಿಕೆಯ ವಿದ್ವಾಂಸರು ಇಂದು ಅಗಲಿದ್ದಾರೆ. ತಾಯಿ ಭುವನೇಶ್ವರಿಯು ಅವರ ಆತ್ಮಕ್ಕೆ ಚಿರ ಶಾಂತಿಯನ್ನು ನೀಡಲಿ ಹಾಗೂ ಅವರ ಕುಟುಂಬದ ಸದಸ್ಯರಿಗೆ, ಅಪಾರ ಬಂಧು-ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವ ಬಿ.ಎ.ಬಸವರಾಜ ಅವರು ತಮ್ಮ ಸಂತಾಪ ಸೂಚಕ ಸಂದೇಶದಲ್ಲಿ ಹೇಳಿದ್ದಾರೆ.