ಸಹಾಯಕ ಸಬ್ ಇನ್ಸ್ಪೆಕ್ಟರ್ ಹುದ್ದೆಯಿಂದ ಸಬ್ ಇನ್ಸ್ಪೆಕ್ಟರ್ ಬಡ್ತಿ ಪಡೆಯಲು ಇದ್ದ ಕನಿಷ್ಠ ಸೇವಾವಧಿ ವರ್ಷಗಳನ್ನು ಕಡಿತ ಮಾಡಲು ಸರ್ಕಾರ ತೀರ್ಮಾನಿಸಿದೆ.
ಮಂಗಳವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ, ಗೃಹ ಇಲಾಖೆಯಿಂದ ಪ್ರಸ್ತಾಪಿತ ವಾದ, A.S.I ಸಿಬ್ಬಂದಿಗಳಿಗೆ, ಮುಂದಿನ ಶ್ರೇಣಿಗೆ ಬಡ್ತಿ ಪಡೆಯಲು ಪ್ರಸ್ತುತ ಇದ್ದ 5 ವರ್ಷಗಳ ಕನಿಷ್ಠ ಸೇವಾ ಅವಧಿಯನ್ನು ನಾಲ್ಕು ವರ್ಷಗಳಿಗೆ ಇಳಿಸಲು ಒಪ್ಪಿಗೆ ಪಡೆಯಲಾಗಿದೆ.
ಈ ಸಂಬಂಧ ಗೃಹ ಇಲಾಖೆಯಿಂದ ಪ್ರಸ್ತಾಪವನ್ನು ಸಲ್ಲಿಸಲಾಗಿತ್ತು. A.S.I ಶ್ರೇಣಿಯ ಅಭ್ಯರ್ಥಿಗಳಿಗೆ ಮುಂಬಡ್ತಿ ಪಡೆಯಲು, ಈ ನಿರ್ಧಾರ ಸಹಾಯಕವಾಗಲಿದ್ದು ಪೊಲೀಸ್ ಪಾಳಯದಲ್ಲಿ ಸಂತಸ ಮನೆ ಮಾಡಿದೆ.
ಪೊಲೀಸ್ ಸಿಬ್ಬಂದಿಗೆ 14.5 ಕೋಟಿ ರೂಪಾಯಿ ವೆಚ್ಚದಲ್ಲಿ, ಇಲಾಖೆಯ ನಿಸ್ತಂತು ಸಂಪರ್ಕ ಜಾಲಕ್ಕೆ ಆಧುನಿಕ ಸ್ಪರ್ಶ ನೀಡಿ ಮೇಲ್ದರ್ಜೆಗೇರಿಸುವ ಯೋಜನೆಗೂ ಸಚಿವ ಸಂಪುಟದ ಸಭೆ ಒಪ್ಪಿಗೆ ನೀಡಿದೆ.