ಮಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ ಮುಖಂಡರಾದ ಶರಣ್ ಪಂಪ್ವೆಲ್ ಮತ್ತು ಪುನೀತ್ ಅತ್ತಾವರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಾಮಾಜಿಕ ಜಾಲತಾಣದ ಮೂಲಕ ಹೇಳಿಕೆ ಹರಿಬಿಟ್ಟಿದ್ದ ಆರೋಪದಲ್ಲಿ ಪುನಿತ್ ಅತ್ತಾವರ ವಿರುದ್ಧ ಮಂಗಳೂರಿನ ಸೆನ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಎಚ್ಚರಿಕೆಯನ್ನು ನೀಡಿದ್ದಾರೆ.




























































