ಬೆಂಗಳೂರು: ರಾಜ್ಯದಲ್ಲಿ ವಿಧವಾದ ಬಿರುಗಾಳಿ ಎಬ್ಬಿಸಿರುವ ಪಿಎಸ್ಐ ನೇಮಕಾತಿ ಅಕ್ರಮವನ್ನು ಮುಂದಿಟ್ಟು ರಾಜ್ಯ ಸರ್ಕರದ ವಿರುದ್ದ ಕಾಂಗ್ರೆಸ್ ನಾಯಕರು ಸಮರವನ್ನೇ ಸಾರಿದ್ದಾರೆ. ಈ ವಿಚಾರ ಮುಂದಿಟ್ಟು ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರು, ಪಿಎಸ್ಐ ನೇಮಕಾತಿ ಪ್ರಕರಣದಲ್ಲಿ ಗೃಹ ಸಚಿವರ ನೇರ ಪಾತ್ರ ಇದೆ ಎಂದು ಆರೋಪಿಸಿದ್ದಾರೆ.
ಗೃಹ ಸಚಿವ ಅರಗ ಜ್ಞಾನೇಂದ್ರ ಅವರು 545 PSI ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದಿದ್ದರು.
ಈಗ ಸರ್ಕಾರ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಪಡಿಸಿ ಮರು ಪರೀಕ್ಷೆಗೆ ಮುಂದಾಗಿದೆ. ಸರ್ಕಾರ ಮರು ಪರೀಕ್ಷೆಗೆ ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲರ್ ತಂತ್ರವಷ್ಟೆ. ಆದರೆ ಗೃಹ ಸಚಿವರ ಪಾತ್ರವಿಲ್ಲದೆ #PSISCAM ನಡೆಯಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.
1
ಗೃಹ ಸಚಿವ @JnanendraAraga 545 PSI ನೇಮಕಾತಿಯಲ್ಲಿ ಅಕ್ರಮವೇ ನಡೆದಿಲ್ಲ ಎಂದಿದ್ದರು.
ಈಗ ಸರ್ಕಾರ ಇಡೀ ನೇಮಕಾತಿ ಪ್ರಕ್ರಿಯೆಯನ್ನೇ ರದ್ದು ಪಡಿಸಿ ಮರು ಪರೀಕ್ಷೆಗೆ ಮುಂದಾಗಿದೆ.ಸರ್ಕಾರ ಮರು ಪರೀಕ್ಷೆಗೆ ಮುಂದಾಗಿರುವುದು ಡ್ಯಾಮೇಜ್ ಕಂಟ್ರೋಲರ್ ತಂತ್ರವಷ್ಟೆ.
ಆದರೆ ಗೃಹ ಸಚಿವರ ಪಾತ್ರವಿಲ್ಲದೆ #PSISCAM ನಡೆಯಲು ಸಾಧ್ಯವೇ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 30, 2022
PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ನೇರ ಪಾತ್ರವಿದೆ. ಪ್ರಕರಣದ ಕಿಂಗ್‌ಪಿನ್ ಬಂಧಿತೆ ದಿವ್ಯಾ ಹಾಗರಗಿ ಮನೆಗೆ ಜ್ಞಾನೇಂದ್ರರವರು ಡೀಲಿಂಗ್ ಮಾಡಲು ಹೋಗಿದ್ದು ಸತ್ಯವಲ್ಲವೆ?
ಪ್ರಕರಣದ ಬಗ್ಗೆ ಮಾಹಿತಿ ಕೊಡುವವರಿಗೆ ನೋಟಿಸ್ ಕೊಡುವ CID ಜ್ಞಾನೇಂದ್ರರ ವಿಚಾರಣೆಯನ್ನು ಇನ್ನೂ ಯಾಕೆ ನಡೆಸಿಲ್ಲ? CID ಯಾರನ್ನು ರಕ್ಷಿಸುತ್ತಿದೆ? ಎಂದೂ ಅವರು ಪ್ರಶ್ನಿಸಿದ್ದಾರೆ.
2
PSI ಅಕ್ರಮ ನೇಮಕಾತಿಯಲ್ಲಿ ಗೃಹ ಸಚಿವರ ನೇರ ಪಾತ್ರವಿದೆ.
ಪ್ರಕರಣದ ಕಿಂಗ್‌ಪಿನ್ ಬಂಧಿತೆ ದಿವ್ಯಾ ಹಾಗರಗಿ ಮನೆಗೆ ಜ್ಞಾನೇಂದ್ರರವರು ಡೀಲಿಂಗ್ ಮಾಡಲು ಹೋಗಿದ್ದು ಸತ್ಯವಲ್ಲವೆ?
ಪ್ರಕರಣದ ಬಗ್ಗೆ ಮಾಹಿತಿ ಕೊಡುವವರಿಗೆ ನೋಟಿಸ್ ಕೊಡುವ CID ಜ್ಞಾನೇಂದ್ರರ ವಿಚಾರಣೆಯನ್ನು ಇನ್ನೂ ಯಾಕೆ ನಡೆಸಿಲ್ಲ? CID ಯಾರನ್ನು ರಕ್ಷಿಸುತ್ತಿದೆ?— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) April 30, 2022