ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ದಿನಾಂಕ ಘೋಷಣೆಯಾಗಿದೆ. ಮಾರ್ಚ್ 9ರಿಂದ 29ರವರೆಗೆ ಪರೀಕ್ಷೆ ನಡೆಯಲಿದೆ. ನಿತ್ಯ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ಪರೀಕ್ಷೆಗಳು ನಡೆಯಲಿದ್ದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
2023ರ ಮಾರ್ಚ್ 9ರಿಂದ ಮಾರ್ಚ್ 29ರ ವರೆಗೆ ಪರೀಕ್ಷೆ ನಡೆಯಲಿವೆ. #2ndPucExam2023 pic.twitter.com/y9OnR98UKD
— B.C Nagesh (@BCNagesh_bjp) November 28, 2022
ಪಿಯುಸಿ ಪರೀಕ್ಷಾ ವೇಳಾಪಟ್ಟಿ ಹೀಗಿದೆ:
09.0.3.2023 : ಕನ್ನಡ, ಅರೇಬಿಕ್
11.03.2023 : ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
13.03.2023 : ಅರ್ಥಶಾಸ್ತ್ರ
14.03.2023 : ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃ ಶಾಸ್ತ್ರ, ರಸಾಯನ ಶಾಸ್ತ್ರ, ಮೂಲ ಗಣಿತ
15.03.2023 : ತಮಿಳು,ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
16.03.2023 : ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
17.03.2023 : ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
18.03.2023 : ಭೂಗೋಳಶಾಸ್ತ್ರ, ಜೀವಶಾಸ್ತ್ರ
20.03.2023 : ಇತಿಹಾಸ, ಭೌತಶಾಸ್ತ್ರ
21.03.2023 : ಹಿಂದಿ
23.03.2023 : ಇಂಗ್ಲೀಷ್
25.03.2023 : ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
27.03.2023 : ಐಚ್ಛಿಕ ಕನ್ನಡ,ಲೆಕ್ಕಶಾಸ್ತ್ರ,ಗೃಹ ವಿಜ್ಞಾನ
29.03.2023 : ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ,ಗಣಕ ವಿಜ್ಞಾನ
























































