ಬೆಂಗಳೂರು: ಪುಲಿಕೇಶಿ ನಗರದಲ್ಲಿ ಹಾಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆಗಳ ಬಗ್ಗೆ ಅವರ ಆಪ್ತರ ವಲಯದಲ್ಲಿ ಇನ್ನೂ ಅನುಮಾನ ಇದೆ. ಈ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕೂಡಾ ಪುಲಿಕೇಶಿ ನಗರ ಕ್ಷೇತ್ರದ ಅನಿಶ್ಚಿತತೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಪುಲಿಕೇಶಿ ನಗರದಲ್ಲಿ ಪಕ್ಷದ ತೀರ್ಮಾನವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ತಮ್ಮದೇ ದಾಟಿಯಲ್ಲಿ ಉತ್ತರಿಸಿದರು. ‘ಪಕ್ಷದ ಕಾರ್ಯಕರ್ತರು, ನಾಯಕರು ನಮ್ಮ ಜತೆ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ವಿಷಯವನ್ನೇ ಗೊಂದಲವಿದೆ ಎಂದು ಭಾವಿಸಬಾರದು ಎಂದವರು ಹೇಳಿದ್ದಾರೆ.
ಕಾರ್ಯಕರ್ತರಿಗೆ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡದೇ ಇರುವ ಪಕ್ಷ ನಮ್ಮದಲ್ಲ. ನಮ್ಮದು ಪ್ರಜಾಸತಾತ್ಮಕ ಪಕ್ಷ. ಎಲ್ಲರೂ ತಮ್ಮ ನೋವು, ಕಷ್ಟ, ಸುಖ ಹೇಳಿಕೊಂಡಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂಬ ಆತ್ಮವಿಶ್ವಾಸದಿಂದ 10-15 ಮಂದಿ ಟಿಕೆಟ್ ಗೆ ಅರ್ಜಿ ಹಾಕಿದ್ದಾರೆ’ ಎಂದು ಅವತು ತಿಳಿಸಿದ್ದಾರೆ.
ಇದೇ ವೇಳೆ, ರಾಹುಲ್ ಗಾಂಧಿ ಅವರ ಕೋಲಾರ ಕಾರ್ಯಕ್ರಮದ ವೇಳಾಪಟ್ಟಿ ಬದಲಾಗಲಿದೆಯೇ ಎಂಬ ಬಗ್ಗೆ ಪ್ರತಿಕ್ರಿಯಿಸಿದ ಡಿಕೆಶಿ, ‘ನಾವು 9 ಅಥವಾ 10ರ ದಿನಾಂಕ ನೀಡಿದ್ದು, ಎಐಸಿಸಿಯು ರಾಹುಲ್ ಗಾಂಧಿಯವರ ಪ್ರವಾಸಪಟ್ಟಿ ಬಿಡುಗಡೆ ಮಾಡಲಿದೆ ಎಂದರು.