ಬೆಂಗಳೂರು: ಬಾಲ್ಯದಲ್ಲೇ ಚಿತ್ರರಂಗ ಪ್ರವೇಶಿಸಿ ಕನ್ನಡಿಗರ ಕಣ್ಮಣಿಯೆನಿಸಿದ್ದ ಕನ್ನಡ ಚಿತ್ರರಂಗದ ಯುವ ನಟರಾದ ಪುನೀತ್ ರಾಜ್‍ಕುಮಾರ್ ಅವರ ನಿಧನ ನಿಜಕ್ಕೂ ಆಘಾತಕರ ಸುದ್ದಿ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
“ಪವರ್ ಸ್ಟಾರ್” ಎಂದೇ ಪುನೀತ್ ಖ್ಯಾತಿ ಪಡೆದಿದ್ದರು. ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಪ್ರಖ್ಯಾತ ನಟರಾದ ಡಾ. ರಾಜ್‍ಕುಮಾರ್ ಅವರ ಪುತ್ರರಾದ ಪುನೀತ್ ಅವರು “ಅಪ್ಪು’ ಎಂದೇ ಜನಗನ್ನಣೆ ಗಳಿಸಿದ್ದರು. ನಾಡಿನ ಸಮಸ್ತ ಕನ್ನಡಿಗರಿಗೆ ಈ ವಿಷಯ ಆಘಾತವನ್ನು ತಂದಿದೆ ಎಂದು ತಿಳಿಸಿದ್ದಾರೆ.
ಅಪ್ಪ ಡಾ.ರಾಜ್ಕುಮಾರ್ ಅವರಂತೆ ಸಾವಿನಲ್ಲೂ ನಟ ಹಾಗೂ ಧೀಮಂತ. ವ್ಯಕ್ತಿ ಪುನಿತ್ ರಾಜ್‌ಕುಮಾರ್ ಸಾರ್ಥಕತೆ ಮೆರೆದಿದ್ದಾರೆ.
ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ, ಆ ಎರಡು ಕಣ್ಣುಗಳು ಬೇರೆಯವರ ಅಂದಕಾರವನ್ನು ಹೋಗಲಾಡಿಸಿ ಪ್ರಪಂಚ ನೋಡುವ ಭಾಗ್ಯವನ್ನು ಕರುಣಿಸಿದ ನಟ ಪುನಿತ್ ರಾಜ್‌ಕುಮಾರ್ ಅವರಿಗೆ ಹೃದಯಪೂರ್ವಕ ನಮನಗಳು 🙏🙏🙏
3/3
— C T Ravi 🇮🇳 ಸಿ ಟಿ ರವಿ (Modi Ka Parivar) (@CTRavi_BJP) October 29, 2021
ಮೃತರ ಕುಟುಂಬ, ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಸಿ.ಟಿ.ರವಿ ಅವರು ಪ್ರಾರ್ಥಿಸಿದ್ದಾರೆ.
ಅಪ್ಪ ಡಾ.ರಾಜ್ಕುಮಾರ್ ಅವರಂತೆ ಸಾವಿನಲ್ಲೂ ಪುನೀತ್ ರಾಜ್‍ಕುಮಾರ್ ಸಾರ್ಥಕತೆ ಮೆರೆದಿದ್ದಾರೆ. ತಮ್ಮ ಎರಡು ಕಣ್ಣುಗಳನ್ನು ದಾನ ಮಾಡಿ. ಆ ಎರಡು ಕಣ್ಣುಗಳು ಬೇರೆಯವರ ಅಂಧಕಾರವನ್ನು ಹೋಗಲಾಡಿಸಿ ಪ್ರಪಂಚ ನೋಡುವ ಭಾಗ್ಯವನ್ನು ಕರುಣಿಸಿದ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಶತ ಶತ ನಮನಗಳು ಎಂದು ಅವರು ತಿಳಿಸಿದ್ದಾರೆ.