ಬೆಂಗಳೂರು: ಪವರ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ಕನ್ನಡ ಚಿತ್ರರಂಗದ ಯುವ ನಟರಾದ ಪುನೀತ್ ರಾಜ್‍ಕುಮಾರ್ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಕನ್ನಡ ಚಿತ್ರರಂಗದ ಪ್ರತಿಭಾವಂತ ಮತ್ತು ಪ್ರಖ್ಯಾತ ನಟರಾದ ಡಾ. ರಾಜ್‍ಕುಮಾರ್ ಅವರ ಪುತ್ರರಾದ ಪುನೀತ್ ಅವರು “ಅಪ್ಪು’ ಎಂದೇ ಖ್ಯಾತಿ ಪಡೆದಿದ್ದು ಕನ್ನಡಿಗರ ಕಣ್ಮಣಿ ಎನಿಸಿದ್ದರು. ಬಾಲ್ಯದಲ್ಲೇ ಚಿತ್ರರಂಗ ಪ್ರವೇಶಿಸಿದ್ದ ಅವರ ನಿಧನ ನಿಜಕ್ಕೂ ಆಘಾತಕರ ಸುದ್ದಿ. ನಾಡಿನ ಸಮಸ್ತ ಕನ್ನಡಿಗರಿಗೆ ಈ ವಿಷಯ ಆಘಾತವನ್ನು ತಂದಿದೆ ಎಂದು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಜನರು ಶಾಂತಿ- ಸಂಯಮದಿಂದ ವರ್ತಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಮೃತರ ಕುಟುಂಬ, ರಾಜ್‍ಕುಮಾರ್ಬಂಧುಮಿತ್ರರಿಗೆ ಹಾಗೂ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದುರಾಜ್‍ಕುಮಾರ್ ನಳಿನ್‍ಕುಮಾರ್ ಕಟೀಲ್ ಅವರು ಪ್ರಾರ್ಥಿಸಿದ್ದಾರೆ.