ಮಾಸ್ಕೊ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅತ್ಯುನ್ನತ ಪುರಸ್ಕಾರ ಲಭಿಸಿದೆ. ಪ್ರಧಾನಿ ನರೇಂದ್ರ ಮೋದಿಯವರಿಗೆ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪಾಸಲ್ ದಿ ಫಸ್ಟ್ ಕಾಲ್ಡ್’ ಎಂಬ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಅಲ್ಲಿನ ಸರ್ಕಾರ ಗೌರವಿಸಿದೆ.
#WATCH | Russian President Vladimir Putin confers Russia’s highest civilian honour, Order of St Andrew the Apostle on Prime Minister Narendra Modi. pic.twitter.com/aBBJ2QAINF
— ANI (@ANI) July 9, 2024
ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರು ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರಿಗೆ ಈ ಪುರಸ್ಕಾರ ಪ್ರದಾನ ಮಾಡಿದರು.
ಭಾರತ-ರಷ್ಯಾ ನಡುವಿನ ವಿಶೇಷ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ಕೊಡುಗೆ ನೀಡಿರುವುದಕ್ಕಾಗಿ ಭಾರತದ ಪ್ರಧಾನಿಗೆ ಈ ಗೌರವ ನೀಡಲಾಗಿದೆ ಎಂದು ಪುಟಿನ್ ಹೇಳಿದ್ದಾರೆ.
ಪುರಸ್ಕಾರ ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ಪ್ರಶಸ್ತಿಯನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸುವೆ ಎಂದಿದ್ದಾರೆ.























































