ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕಡಬ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಕಾರು ಮತ್ತು ತೂಫಾನ್ ವಾಹನ ಪರಸ್ಪರ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ. ಕಡಬ ಸಮೀಪದ ನೆಟ್ಟಣ ಎಂಬಲ್ಲಿ ಈ ದುರಂತ ಸಂಭವಿಸಿದ್ದು ಹಲವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಪಘಾತದ ಸ್ಥಳಕ್ಕೆ ಭೇಟಿ ನೀಡಿರುವ ಕಡಬ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.