ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ಅವರು ಕರ್ನಾಟಕ ರಾಜ್ಯ ಆಡಳಿತ ಸೇವೆಗಳ ಟ್ರಿಬ್ಯುನಲ್ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ನಿವೃತ್ತ ಪೊಲೀಸ್ ಮಹಾ ನಿರ್ದೇಶಕರಾಗಿರುವ ರಾಘವೇಂದ್ರ ಔರಾದ್ಕರ್ ಅವರನ್ನು ರಾಷ್ಟ್ರಪತಿ ನೇಮಕ ಮಾಡಿದ್ದು, ಅದರಂತೆ ರಾಜ್ಯ ಸರ್ಕಾರ ನೇಮಕಾತಿ ಆದೇಶ ಹೊರಡಿಸಿದೆ.
ನಾಲ್ಕು ವರ್ಷಗಳ ಅವಧಿಗೆ ಅಚರನ್ನು ನೇಮಕ ಮಾಡಲಾಗಿದೆ. ಔರಾದ್ಕರ್ ಅವರು 67 ವರ್ಷ ವಯಸ್ಸಿನವರೆಗೆ ಈ ಸೇವೆಯಲ್ಲಿ ಮುಂದುವರಿಯಲು ಅವಕಾಶವಿದೆ.






































































