ದೊಡ್ಡಬಳ್ಳಾಪುರ: ಬೆಂಕಿ ತಗುಲಿದ ಪರಿಣಾಮ ಮೆದೆ ಹಾಕಲಾಗಿದ್ದ ಸುಮಾರು 4 ಲೋಡ್ ರಾಗಿ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿರುವ ಘಟನೆ ಹಾಡೋನಹಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಹಾಡೋನಹಳ್ಳಿ ಗ್ರಾಮದ ಚೌಡಣ್ಣ ಎನ್ನುವವರು ರಾಗಿ ಹುಲ್ಲನ್ನು ಬಣವೆ ಮಾಡಿದ್ದು , ಶುಕ್ರವಾರ 12 ಗಂಟೆ ಸುಮಾರಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಬೆಂಕಿಯನ್ನು ನಂದಿಸಲು ಗ್ರಾಮಸ್ಥರು ಹರಸಾಹಸಪಟ್ಟರು. ಸಾಧ್ಯವಾಗದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ ಘಟನೆಯಲ್ಲಿ ಸುಮಾರು 30ರಿಂದ 40 ಸಾವಿರ ಮೌಲ್ಯದ ರಾಗಿ ಹುಲ್ಲು ಬೆಂಕಿಗೆ ಆಹುತಿಯಾಗಿದ್ದು ರೈತ ಚೌಡಣ್ಣ ಸಾಕಿರುವ ಹಸುಗಳಿಗೆ ಹುಲ್ಲನ್ನು ಖರೀದಿ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.