ಚಿಕ್ಕಮಗಳೂರು: ನಟಿ ರಾಗಿಣಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಸ್ಪಷ್ಟಪಡಿಸಿದ್ದಾರೆ.

ಡ್ರಗ್ಸ್ ದಂಧೆಯ ಪ್ರಕರಣದಲಿ ಬಂಧಿತರಾಗಿರುವ ನಟಿ ರಾಗಿಣಿ ಈ ಹಿಂದೆ ಉಪ ಚುನಾವಣೆ ವೇಳೆ ಬಿಜೆಪಿ ಪರ ಪ್ರಚಾರ ಮಾಡುತ್ತಿದ್ದ ವೀಡಿಯೋಗಳು ಹರಿದಾಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿ.ಟಿ.ರವಿ, ನಟಿ ರಾಗಿಣಿಯವರಿಗೆ ನೇರವಾಗಿ ಪಕ್ಷದ ಯಾವ ಜವಾಬ್ದಾರಿ ಇಲ್ಲ. ನಟಿಯಾಗಿ ಅವರಿಗೆ ಅವರದೇ ಸ್ಥಾನವಿದೆ.ಬಿಜೆಪಿಗೂ ಅವರಿಗೂ ಯಾವ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ನಮ್ಮದು ಕಾಂಪ್ರಮೈಸ್, ಅಡ್ಜೆಸ್ಟ್ ಮೆಂಟ್ ಮಾಡಿಕೊಳ್ಳುವ ಪಕ್ಷವಲ್ಲ. ಯಾರೇ ಆಗಲಿ, ತಪ್ಪು ಮಾಡಿದ್ದವರಿಗೆ ಶಿಕ್ಷೆ ಆಗಲೇಬೇಕು ಎಂದು ಸಚಿವ ರವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.







































































