ದೆಹಲಿ: ದಿಢೀರ್ ಬೆಳವಣಿಗೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಲೋಕಸಭಾ ಸದಸ್ಯತ್ವದಿಂದ ಅಮಾನತುಗೊಂಡಿದ್ದಾರೆ. ಮೋದಿ ಬಗ್ಗೆ ಅವಹೇಳನ ಮಾಡಲಾಗಿದೆ ಎಂಬ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆ ಘೋಷಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.
ರಾಹುಲ್ ಗಾಂಧಿ ಅವರು ಕೇರಳದ ವಯನಾಡ್ ಕ್ಷೇತ್ರದ ಲೋಕಸಭೆಗೆ ಆಯ್ಕೆಯಾಗಿದ್ದರು. ಇದೀಗ ಎರಡು ವರ್ಷಗಳ ಕಾಲ ಶಿಕ್ಷೆಗೆ ಗುರಿಯಾಗಿರುವ ಕಾರಣ ನಿಯಮಾನುಸಾರ ಸಂಸತ್ ಸದಸ್ಯತ್ವದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಆದೇಶಿಸಲಾಗಿದೆ.
2019ರಲ್ಲಿ ಚುನಾವಣಾ ಸಂದರ್ಭದಲ್ಲಿ ರಾಹುಲ್ ಗಾಂಧಿ ನೀಡಿದ್ದ ಹೇಳಿಕೆ ಕುರಿತಂತೆ ಬಿಜೆಪಿ ನಾಯಕರು ಹೂಡಿದ್ದ ಮಾನನಷ್ಟ ಧಾವೆ ಸಂಬಂಧ ಸೂರತ್‌ನ ಕೋರ್ಟ್ ಗುರುವಾರ ತೀರ್ಪು ಪ್ರಕಟಿಸಿತ್ತು. ಶಿಕ್ಷೆ ಪ್ರಕಟಗೊಂಡ ಮರುದಿನವೇ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಿಂದ ಅನರ್ಹರಾಗಿದ್ದಾರೆ.
Rahul Gandhi – Congress MP from Wayanad, Kerala – disqualified as a Member of Lok Sabha following his conviction in the criminal defamation case over his 'Modi surname' remark. pic.twitter.com/SQ1xzRZAot
— ANI (@ANI) March 24, 2023