ನವದೆಹಲಿ: ಲೋಕಸಭೆಯ ಪ್ರತಿಪಕ್ಷ ನಾಯಕನಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಯ್ಕೆಯಾಗಿದ್ದಾರೆ.
ದೆಹಲಿಯಲ್ಲಿ ಮಂಗಳವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ‘ಇಂಡಿಯಾ’ ಮಿತ್ರಪಕ್ಷಗಳ ನಾಯಕರ ಸಭೆಯಲ್ಲಿ ಕಾಂಗ್ರೆಸ್ ನಾಯಕರು ರಾಹುಲ್ ಗಾಂಧಿಯವರನ್ನು ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಸೂಚಿಸಿದೆ.
ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರು ಲೋಕಸಭೆಯ ಹಂಗಾಮಿ ಸ್ಪೀಕರ್ ಭರ್ತೃಹರಿ ಮಹತಾಬ್ ಅವರಿಗೆ ಪತ್ರ ಬರೆದು, ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿ @RahulGandhi ಅವರ ನೇಮಕದ ನಿರ್ಧಾರವನ್ನು ತಿಳಿಸಿದ್ದಾರೆ.
– @kcvenugopalmp pic.twitter.com/xwiF8Q4kuz— Karnataka Congress (@INCKarnataka) June 25, 2024
‘ಇಂಡಿಯ’ ನಾಯಕರ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಕೆ.ಸಿ.ವೇಣುಗೋಪಾಲ್, ರಾಯಬರೇಲಿ ಕ್ಷೇತ್ರದ ಸಂಸದರೂ ಆದ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.