ದೆಹಲಿ: ಕೇಂದ್ರ ಸರ್ಕಾರದ ವಿರುದ್ಧ ಟೀಕಾಸ್ತ್ರ ಮುಂದುವರಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧೀ ಇದೀಗ ಮೋದಿ ಸರ್ಕಾರದ ವಿರುದ್ಧ ಅಭಿಯಾನ ಆರಂಭಿಸಿದ್ದಾರೆ.
ಕೇಂದ್ರ ಸರ್ಕಾರ ಪ್ರತಿ ವರ್ಷ 2 ಕೋಟಿ ಯುವಕರಿಗೆ ಉದ್ಯೋಗ ನೀಡುವ ಭರವಸೆಯನ್ನು ಈಡೇರಿಸುವಲ್ಲಿ ವಿಫಲವಾಗಿದೆ ಎಂದು ದೂರಿರುವ ರಾಹುಲ್ ಗಾಂಧೀ, ದೇಶದ ಕೋಟ್ಯಾಂತರ ಯುವ ಜನರು ನಿರುದ್ಯೋಗಿಗಳಾಗಿದ್ದಾರೆ.ದೇಶದ ಆರ್ಥಿಕ ರಚನೆಯನ್ನೇ ಬಿಜೆಪಿ ಸರ್ಕಾರ ನಾಶಪಡಿಸಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಈ ಬಗ್ಗೆ ಅವರು ಟ್ವೀಟ್ ಮಾಡಿದ್ದಲ್ಲದೆ, 90 ಸೆಕೆಂಡ್ ವಿಡಿಯೋ ಹಂಚಿಕೊಂಡಿದ್ದು, ಈ ವಿಡಿಯೋದಲ್ಲಿ “ರೊಜ್‌ಗಾರ್ ದೊ” (ಉದ್ಯೋಗವನ್ನು ಒದಗಿಸಿ) ಅಭಿಯಾನವನ್ನು ಆರಂಭಿಸಿದ್ದಾರೆ. ಉದ್ಯೋಗವಿಲ್ಲದ ಯುವಜನರು ಮತ್ತು ಇತರರು ದನಿ ಎತ್ತಿ ಸರ್ಕಾರವನ್ನು ಜಾಗೃತಗೊಳಿಸಬೇಕು ಎಂದು ಅವರು ಕರೆ ನೀಡಿದ್ದಾರೆ.
देश के युवाओं के मन की बात:
रोज़गार दो, मोदी सरकार!आप भी अपनी आवाज़ युवा कॉंग्रेस के #RozgarDo के साथ जोड़कर, सरकार को नींद से जगाइये।
ये देश के भविष्य का सवाल है। pic.twitter.com/zOt6ng2T0M
— Rahul Gandhi (@RahulGandhi) August 9, 2020