ಕಲಬುರಗಿಯಲ್ಲಿ ಅರೋಗ್ಯ ಇಲಾಖೆಯ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದಾರೆ. ನಕಲಿ ವೈದ್ಯರ ಹಾವಳಿ ಬಗ್ಗೆ ವ್ಯಾಪಕ ದೂರು ಕೇಳಿಬಂದಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.
ನಕಲಿ ವೈದ್ಯರ ಅಡ್ಡೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಸುಮಾರು 43 ಕ್ಲಿನಿಕ್ಗಳನ್ನು ಬಂದ್ ಮಾಡಿರುವ ಅಧಿಕಾರಿಗಳು 109 ನಕಲಿ ವೈದ್ಯರ ಹೆಸರುಗಳನ್ನೂ ಗುರುತಿಸಿದ್ದಾರೆ ಎನ್ನಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು, ತಹಶೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳೊಂದಿಗೆ ಕಾರ್ಯಾಚರಣೆ ನಡೆಸಿದ್ದು ಸರಿಯಾದ ಅನುಮತಿ ಪಡೆಯದೆ ಚಿಕಿತ್ಸೆ ನೀಡುತ್ತಿದ್ದ ಆರೋಪದಲ್ಲಿ ಕ್ಲಿನಿಕ್ಗಳಿಗೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.



























































