ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗಿದ್ದು, ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದೆ. ಮಳೆಯಿಂದಾಗಿ ಸುಮಾರು 280 ಗ್ರಾಮಗಳಲ್ಲಿ ಭಾರೀ ಹಾನಿ ಸಂಭವಿಸಿದ್ದು, 2500ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿವೆ. 130ಕ್ಕೂ ಹೆಚ್ಚು ಮನೆಗಳು ಸಂಪೂರ್ಣ ಹಾಳಾಗಿವೆ ಎಂದು ಹೇಳಲಾಗುತ್ತಿದೆ.
ರಾಜ್ಯದ ವಿವಿಧೆಡೆ, 3500ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಹಾನಿಗೊಳಗಾಗಿವೆ ಎಂದು ಮಾಹಿತಿ ಕಳೆಹಾಕಲಾಗಿದೆ. ನೂರಕ್ಕೂ ಹೆಚ್ಚು ಸೇತುವೆಗಳು, 200ಕ್ಕೂ ಶಾಲಾ ಕಟ್ಟಡಗಳು ಹಾನಿಗೊಳಗಾಗಿವೆ.
ಈ ನಡುವೆ, ಸಂಪೂರ್ಣವಾಗಿ ಮನೆ ಹಾನಿಯಾದ ಸಂತ್ರಸ್ತರಿಗೆ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಸಂಪೂರ್ಣವಾಗಿ ಮನೆಗಳು ಹಾನಿಗೊಂಡಿದ್ದರೆ ಅಂತಹಾ ಕುಟುಂಬಗಳಿಗೆ ತಕ್ಷಣದ ಪರಿಹಾರವಾಗಿ 1 ಲಕ್ಷ ರೂಪಾಯಿ ಬಿಡುಗಡೆ ಮಾಡಲು ಸರ್ಕಾರ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವಾಲಯದ ಮೂಲಗಳು ತಿಳಿಸಿವೆ.