ಬೆಂಗಳೂರು: ಕೆಲವು ದಿನಗಳಲ್ಲಿ ಆರ್ಭಟಿಸುತ್ತಿರುವ ಮಳೆ ಮತ್ತೆ ಮುಂದುವರಿಯಲಿದೆ. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತ ಮತ್ತು ಬಂಗಾಳ ಕೊಲ್ಲಿಯ ಮೇಲ್ಮೈ ಸುಳಿಗಾಳಿ ಸೃಷ್ಟಿಸಿದ ಅವಾಂತರದಿಂದಾಗಿ ದಕ್ಷಿಣದ ರಾಜ್ಯಗಳು ನಲುಗಿವೆ. ಕರ್ನಾಟಕ, ಕೇರಳ, ತಮಿಳುನಾಡು ರಾಜ್ಯಗಳಲ್ಲಿ ಭಾರೀ ಮಳೆಯು ಅವಾಂತರ ಸೃಷ್ಟಿಸಿದೆ. ಆಂದ್ರಪ್ರದೇಶ, ತೆಲಂಗಾಣದ ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ.
ರಾಜ್ಯದ ಕರಾವಳಿ ಮತ್ತು ದಕ್ಷಿಣ ಕನ್ನಡ ಒಳನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ. ಶನಿವಾರದವರೆಗೂ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದ್ದು ಹಲವು 19 ಜಿಲ್ಲೆಗಳಲ್ಲಿ ಕಚ್ಚೆಚ್ಚರ ವಹಿಸಲಾಗಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಲವು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
























































