ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
18 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 15ರ ವರೆಗೂ ಭಾರಿ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಉತ್ತರಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಕೊಪ್ಪಳ, ರಾಯಚೂರು, ವಿಜಯಪುರ, ಕೋಲಾರ, ರಾಮನಗರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.