ಬೆಂಗಳೂರು: ಬಂಗಾಳ ಕೊಳ್ಳಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ವಿವಿಧ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ.
ರಾಜ್ಯದಲ್ಲೂ ಮುಂದಿನ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ , ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಇಂದು ಭಾರೀ ಮಳೆಯ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.