ಬೆಂಗಳೂರು: ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು ಇಂದೂ ಕೂಡಾ ಈ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.