ಬೆಂಗಳೂರು: ರಾಜ್ಯದ ಹಲವೆಡೆ ಜುಲೈ 15ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಕುರಿತಂತೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯಾದ ಹಲವೆಡೆ ಈ ತಿಂಗಳ 15ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಬಿರುಗಾಳಿ ಮಳೆಯಾಗುವ ಸಾಧ್ಯತೆಗಳಿವೆ. ಹೀಗಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜು.11ರಂದು ಹಾಗೂ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜುಲೈ12 ಮತ್ತು 13ರಂದು ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಇದೇ ವೇಳೆ, ಕರಾವಳಿಯಲ್ಲಿ ಗಂಟೆಗೆ 45-55 ಕಿ.ಮೀ.ವೇಗದಲ್ಲಿ ಗಾಳಿ ಬೀಸುವುದರಿಂದ ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ .