ದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಪೂರ್ವ ಹಾಗೂ ದಕ್ಷಿಣದ ರಾಜ್ಯಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಸಿಕ್ಕಿದೆ.
ಮಹಾರಾಷ್ಟ್ರ, ದಕ್ಷಿಣ ಕೊಂಕಣ, ಗೋವಾ, ಅಸ್ಸಾಂ, ಮೇಘಾಲಯ, ತ್ರಿಪುರ, ಆಂಧ್ರ ಕರಾವಳಿ, ರಾಯಲಸೀಮೆ, ಕರ್ನಾಟಕದ ದಕ್ಷಿಣ ಒಳನಾಡು, ಕರಾವಳಿ, ಕೇರಳ, ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ವ್ಯಕ್ತವಾಗಿದೆ. ಪಶ್ಚಿಮ ಬಂಗಾಳ, ಗೋವಾ, ಛತ್ತೀಸ್‌ಗಢ್, ಅಸ್ಸಾಂ, ಮೇಘಾಲಯ, ಅರುಣಾಚಲ ಪ್ರದೇಶ, ನಾಗಾಲ್ಯಾಂಡ್, ದೆಹಲಿ, ಜಾರ್ಖಂಡ್, ಗುಜರಾತ್ ರಾಜ್ಯಗಳಲ್ಲಿ ಹೆಚ್ಚಿನ ಮಳೆಯ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಕರ್ನಾಟಕದಲ್ಲೂ ಮಳೆ..
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಕ್ಟೋಬರ್ 10ರ ತನಕ ಮಳೆ ಮುಂದುವರೆಯಲಿದೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ,ಉಡುಪಿ, ಉತ್ತರ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲೂ ಮಳೆ ನಿರೀಕ್ಷೆ ಇದೆ.