ಬೆಂಗಳೂರು: ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ಮನ್ಸೂಚನೆ ಸಿಕ್ಕಿದೆ. ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಶಿವಮೊಗ್ಗದಲ್ಲೂ ಮಳೆಯಾಗಲಿದೆ. ಶಿವಮೊಗ್ಗ, ರಾಮನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ ಮತ್ತು ಕೋಲಾರ ಈ ಜಿಲ್ಲೆಗಳಲ್ಲೂ ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
13 ಜಿಲ್ಲೆಗಳಲ್ಲಿ ಭಾರೀ ಮಳೆ..?
ಆಗಸ್ಟ್ 30ರ ವರೆಗೆ ದಕ್ಷಿಣಕನ್ನಡ, ಉಡುಪಿ, ಉತ್ತರಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ರಾಯಚೂರು, ಧಾರವಾಡ, ಹಾವೇರಿ, ಗದಗ, ಬಳ್ಳಾರಿ, ಮಂಡ್ಯ, ತುಮಕೂರು ಜಿಲ್ಲೆಗಳಲ್ಲೂ ಇನ್ನೆರಡು ಮಳೆಯಾಗಿವ ಸಾಧ್ಯತೆಗಳಿವೆ.