ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ಜುಲೈ 21ರವರೆಗೆ ಮಳೆಯ ಏರಿಳಿತ ಮುಂದುವರೆಯುತ್ತಲೇ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಮತ್ತು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯಗುವ ಮುನ್ಸೂಚನೆ ವ್ಯಕ್ತವಾಗಿದೆ.