ಬೆಂಗಳೂರು: ರಾಜ್ಯದ ಹಲವೆಡೆ ಇಂದು ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು ಸೇರಿ ಕರ್ನಾಟಕದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಗುವ ಸಾಧ್ಯತೆಗಳಿವೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಮೈಸೂರು, ತುಮಕೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಕೋಲಾರ,ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


























































