ಮೈಸೂರು: ಮಳೆ ಪ್ರವಾಹದ ವಿಚಾರದಲ್ಲಿ ರಾಜಕೀಯ ಬೇಡ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಯಿ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಳೆ, ಪ್ರವಾಹದ ವಿಷಯದಲ್ಲಿ ರಾಜಕೀಯವಾಗುತ್ತಿರುವುದು ದುರ್ದೈವದ ಸಂಗತಿ ಎಂದರು.
ರಾಜ್ಯದಾದ್ಯಂತ ಮಿತಿಮೀರಿ ಮಳೆಯಾಗಿದ್ದು ಕೆರೆ ಕಾಲುವೆಗಳು ಉಕ್ಕಿ ಹರಿದಿವೆ. ಈ ಜಲಪ್ರಳಯದ ವಿರುದ್ಧ ಸರ್ಕಾರ ಯುದ್ಧ ಸಾರಿದೆ. ಸಮರದ ಸಂದರ್ಭದಲ್ಲಿ ಒಗ್ಗಟ್ಟು ಪ್ರದ್ರರ್ಶಿಸಬೇಕು, ರಾಜಕೀಯ ಮಾಡುವುದು ಸರಿಯಲ್ಲ – ಶ್ರೀ @BSBommai, ಸನ್ಮಾನ್ಯ ಮುಖ್ಯಮಂತ್ರಿಗಳು. pic.twitter.com/MW9Cngmt9j
— BJP Karnataka (@BJP4Karnataka) September 6, 2022
ಮಳೆ ತಂದಿರುವ ಸಂಕಷ್ಟದ ಸಂದರ್ಭದಲ್ಲಿ ಎಲ್ಲರೂ ಯುದ್ಧೋಪಾದಿಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಮಳೆ ಯಾವ ಪಕ್ಷವನ್ನೂ ನೋಡಿ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಎಲ್ಲ ಕೆರೆಗಳೂ ತುಂಬಿದ್ದು, ದಾಖಲೆಯ ಮಳೆಯಾಗಿದೆ. ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದಲ್ಲಿ ಹೆಚ್ಚು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೆರೆಗಳೆಲ್ಲಾ ತುಂಬಿ ಹರಿಯುತ್ತಿದೆ. ಜಲಪ್ರವಾಹದ ವಿರುದ್ದ ನಾವು ಸಮರ ಸಾರಿದ್ದೇವೆ. ಈ ಸವಾಲನ್ನು ಒಗ್ಗಟ್ಟಾಗಿ ಎದುರಿಸಬೇಕಾಗಿದೆ. ಈ ವಿಷಯದಲ್ಲಿ ರಾಜಕೀಯ ಮಾಡುವುದು ಸಣ್ಣ ಪ್ರವೃತ್ತಿಯಾಗಿದೆ ಎಂದು ಸಿಎಂ ಹೇಳಿದರು.





















































