ಬೆಂಗಳೂರು: ಅರಬ್ಬೀ ಸಮುದ್ರ ಹಾಗೂ ಬಂಗಾಳಕೊಳ್ಳಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಹಲವೆಡೆ 2-3 ದಿನ ಮಳೆಯಾಗುವ ಸಾಧ್ಯತೆಗಳಿವೆ ಈ ಕುರಿತಂತೆ ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ 3 ದಿನ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಮಿಂಚು, ಗಾಳಿ, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಇಂದು ಮತ್ತು ನಾಳೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೀದರ್, ಕಲಬುರ್ಗಿ, ವಿಜಯಪುರ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಿಂದ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಇದರ ಪರಿಣಾಮ ಹಲವು ಜಿಲ್ಲೆಗಳನ್ನು ತಟ್ಟಲಿದೆ. ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
ರಾಜಧಾನಿ ಬೆಂಗಳೂರಿನಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.























































