ಬೆಂಗಳೂರು: ರಾಜ್ಯದ ಹಲವೆಢ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಇನ್ನೂ ಕೆಲವು ದಿನ ಇನ್ನಷ್ಟು ಕಡೆ ಮಳೆಯಾಗುವ ಸಾಧ್ಯತೆಗಳಿವೆ. ಇಂದು ಕರಾವಳಿ, ಮಳೆನಾಡು, ಒಳನಾಡಿನ 19 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ, ಧಾರವಾಡ ಸಹಿತ ಮಲೆನಾಡಿನ ಹಲವೆಡೆ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಹಾವೇರಿ, ವಿಜಯಪುರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞರು ಮುನ್ಸೂಚನೆ ನೀಡಿದ್ದಾರೆ.
Rainfall Forecast: Source IMD: YELLOW ALERT has been given to Dakshina Kannada Udupi Uttara Kannada Bagalkote Belagavi Bidar Dharwad Haveri Kalburgi Raichur Vijayapura Yadgir Bellary Chamarajanagara Chikkamagaluru Hassan Kodagu Mysuru & Shivamogga dists as on 1300hrs of 14-Apr-21
— Karnataka State Natural Disaster Monitoring Centre (@KarnatakaSNDMC) April 14, 2021
ಒಳನಾಡು ಭಾಗದಲ್ಲಿ ಸುಳಿಗಾಳಿ, ಹವಾಮಾನ ವೈಪರೀತ್ಯ ಕಾರಣದಿಂದಾಗಿ ಈ ಬೇಸಿಗೆ ಮಳೆಯ ಸನ್ನಿವೇಶ ಸೃಷ್ಟಿಯಾಗಿದ್ದು, ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.