ಬೆಂಗಳೂರು: ಲೋಕಸಭೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆಯ ಮಾತುಗಳು ಕಾಂಗ್ರೆಸ್ ಪಾಳಯದಲ್ಲಿ ಹರಿದಾಡುತ್ತಿದೆ.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಾಧ್ಯತೆಗಳ ಸುದ್ದಿ ಹಿನ್ನೆಲೆಯಲ್ಲಿ ಅನೇಕ ನಾಯಕರು ಪಕ್ಷದ ಸಾರಥಿಯಾಗುವ ಬಯಕೆ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಸಂದರ್ಭದಲ್ಲಿ ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ತಯಾರಿದ್ದೇನೆ ಎಂದು ಹೇಳಿದ್ದಾರೆ.