ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಬಹಳಷ್ಟಿದ್ದು ಸೂಕ್ತ ಚಿಕಿತ್ಸೆಗಾಗಿ ಸರ್ಕಾರ ಕಸರತ್ತು ನಡೆಸುತ್ತಿದೆ. ಆಸ್ಪತ್ರೆಗಳಲ್ಲಿ ಬೆಡ್‌ಗಳ ಕೊರತೆ ಕಾಡುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆ ವ್ಯವಸ್ಥೆ ವಿಸ್ತರಣೆಗೂ ಸರ್ಕಾರ ಕ್ರಮಕೈಗೊಂಡಿದೆ.
ಇದೇ ಸಂದರ್ಭದಲ್ಲಿ, ಬೆಂಗಳೂರಿನ ಹೆಬ್ಬಾಳದಲ್ಲಿರುವ ರಾಜೀವ್ ಗಾಂಧಿ ದಂತ ಮಹಾವಿದ್ಯಾಲಯದ ಕಟ್ಟಡವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತನೆ ಮಾಡಲಾಗಿದೆ. ಈ ಕೋವಿಡ್ ಕೇರ್ ಸೆಂಟರನ್ನು ಇಂದು ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದರು.
ಸಂಪುಟಸಹೋದ್ಯೋಗಿಗಳು, ಶಾಸಕರಿ, ಅಧಿಕಾರಿಗಳನೇಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.