ಬೆಂಗಳೂರು: ಜಾರ್ಖಂಡ್ ಮತ್ತು ಬಿಹಾರ್ ರಾಜ್ಯಗಳ ರಾಜ್ಯಪಾಲರಾಗಿ, ಪಂಜಾಬ್ ಮತ್ತು ಹರಿಯಾಣ ಹೈ ಕೋರ್ಟಿನ ಉಚ್ಚ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದ, ಆತ್ಮೀಯರು ಹಾಗೂ ಮಾಜಿ ರಾಜ್ಯ ಸಭಾ ಸದಸ್ಯರಾದ ಮಂಡಗದ್ದೆ ಶ್ರೀ ರಾಮ ಜೋಯಿಸ ಇನ್ನಿಲ್ಲ. ರಾಮಾ ಜೋಯಿಸ್ ನಿಧನಕ್ಕೆ ಸಂಸದೆ ಶೋಭಾ ಕರಂದ್ಲಾಜೆ ಗಾಢ ಸಂತಾಪ ವ್ಯಕ್ತಪಡಿಸಿದ್ದಾರೆ.
ಸಮಾಜಕ್ಕೆ ಮಾರ್ಗದರ್ಶಕರಾಗಿದ್ದು, ಹಲವಾರು ಸಮಾಜಮುಖಿ ಕಾರ್ಯದಲ್ಲಿ ತನ್ನನ್ನು ತಾವು ತೊಡಗಿಸಿಕೊಂಡಿದ್ದವರು ರಾಮ ಜೋಯಿಸರು. ಅವರು ರಾಜ್ಯ ಸಭಾ ಸದಸ್ಯರಾಗಿರುವ ಸಂದರ್ಭದಲ್ಲಿ ಸಂಸತ್ತಿನಲ್ಲಿರುವ ಎಲ್ಲ ಸಂಸ್ಕೃತ ಶ್ಲೋಕ ಹಾಗೂ ಬರಹಗಳನ್ನು ಭಾಷಾಂತರಿಸಿ, ಆ ಶ್ಲೋಕಗಳ ಭಾವಾರ್ಥಗಳು ಜನಸಾಮಾನ್ಯರಿಗೆ ತಲುಪುವಂತೆ ಮಾಡಿರುತ್ತಾರೆ ಎಂದು ಶೋಭಾ ಕರಂದ್ಲಾಜೆ ಸ್ಮರಿಸಿದ್ದಾರೆ.
ಗುರುಸ್ವರೂಪರು ಆಗಿರುವ ಶ್ರೀಯುತರ ನಿಧನ ಅತೀವ ದುಃಖವನ್ನು ತಂದಿದೆ, ಭಗವಂತನು ಅವರ ಆತ್ಮಕ್ಕೆ ಚಿರಶಾಂತಿಯನ್ನು ಕರುಣಿಸಲಿ ಹಾಗೆ ಅವರ ಕುಟುಂಬಸ್ಥರಿಗೆ, ಬಂಧು-ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.