ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಹಾಗೂ ರಮಣಶ್ರೀ ಪ್ರತಿಷ್ಠಾನ ಆಯೋಜಿಸಿದ್ದ ಸಮಾರಂಭದಲ್ಲಿ ೧೬ ನೇ ವರ್ಷದ ರಮಣಶ್ರೀ ಶರಣ ಸಾಹಿತ್ಯ ಪ್ರಶಸ್ತಿ ಪ್ರದಾನ ಮಾಡಿದರು.
ಇದೇ ಸಂದರ್ಭದಲ್ಲಿ ಎಸ್. ಷಡಕ್ಷರಿ ಬರೆದಿರುವ ಕ್ಷಣ ಹೊತ್ತು ಆಣಿ ಮುತ್ತು ಭಾಗ ೯ ಪುಸ್ತಕವನ್ನು ಲೋಕಾರ್ಪಣೆ ಮಾಡಲಾಯಿತು.
ಸಮಾರಂಭದಲ್ಲಿ ಡಾ. ಗುರುರಾಜ ಕರಜಗಿ ಅವರಿಗೆ ರಮಣಶ್ರೀ ಶರಣ ಜೀವಮಾನ ಸಾಧಕ ಪ್ರಶಸ್ತಿಯನ್ನು ಸಿಎಂ ಬೊಮ್ಮಾಯಿ ಪ್ರದಾನ ಮಾಡಿದರು. ಡಾ. ಶಾಂತಾ ಇಮ್ರಾಪೂರ, ಡಾ. ಪ್ರದೀಪ ಕುಮಾರ ಹೆಬ್ರಿ, ಡಾ. ನಂದಾ ಪಾಟೀಲ್, ಸ್ವಾಮಿ ವಿವೇಕಾನಂದ ಇಂಟಿಗ್ರೇಟೆಡ್ ಗ್ರಾಮೀಣ ಆರೋಗ್ಯ ಕೇಂದ್ರ, ಡಾ. ಭಾಗ್ಯಮ್ಮ ಜಿ. ಸ್ಮಿತಾರಾವ್ ಬೆಳ್ಳೂರ, ಪತಂಜಲಿ ಯೋಗ ಶಿಕ್ಷಣ ಸಮೀತಿ ಗೆ ರಮಣಶ್ರೀ ಶರಣ ಉತ್ತೇಜನ ಶ್ರೇಣಿ ಪ್ರಶಸ್ತಿ ಪ್ರದಾನ ಮಾಡಿದರು. ಸಮಾರಂಭದಲ್ಲಿ ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ, ಎಸ್ ಷಡಕ್ಷರಿ, ಹಿರಿಯ ಪತ್ರಕರ್ತ ರವಿ ಹೆಗಡೆ, ಸಾಹಿತಿ ಮನು ಬಳಿಗಾರ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.