ಬೆಂಗಳೂರು; ಪ್ರದೇಶ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಶಾಸಕ ರಮೇಶ್ ಬಾಬು ಅವರನ್ನು ರಾಜ್ಯ ಸರ್ಕಾರದ ಪ್ರತಿಷ್ಠಿತ ನಿಗಮಗಳಲ್ಲೊಂದಾದ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ದೇಶನದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾಗಿ ಹಾಗೂ ಕೆಪಿಸಿಸಿ ವಕ್ತಾರರಾಗಿರುವ ಹಿರಿಯ ರಾಜಕೀಯ ವಿಶ್ಲೇಷಕ ರಮೇಶ್ ಬಾಬು ಅವರು ರಾಜ್ಯ ಹೈಕೋರ್ಟ್‌ನ ಹಿರಿಯ ವಕೀಲರೂ ಆಗಿದ್ದಾರೆ. ಬೆಂಗಳೂರು ವಕೀಲರ ವಲಯದ ಪ್ರತಿಷ್ಠಿತ ‘ನ್ಯಾಯಮಿತ್ರ ಸಹಕಾರ ಬ್ಯಾಂಕ್’ನ ನಿಕಟಪೂರ್ವ ಅಧ್ಯಕ್ಷರೂ ಆಗಿರುವ ರಮೇಶ್ ಬಾಬು ಅವರನ್ನು ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ಸ್ ಲಿಮಿಟೆಡ್ ಅಧ್ಯಕ್ಷರ ಹುದ್ದೆಗೆ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ (ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳೊಂದಿಗೆ) ಮುಂದಿನ ಎರಡು ವರ್ಷಗಳ ಅವಧಿಗೆ ರಮೇಶ್ ಬಾಬು ಅವರನ್ನು ಸರ್ಜಾರ ನೇಮಕ ಮಾಡಲಾಗಿದೆ.






































































