ಬೆಂಗಳೂರು: ವಿವಾದಿತ ಸಿ.ಡಿ.ಯ ಚಕ್ರದ ಸುಳಿಯಲ್ಲಿ ಸಿಲುಕಿರುವ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ವಿವಾದಿತ ಪ್ರಸಂಗದ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದ್ದಂತೆಯೇ ಸಂಘ ಪರಿವಾರದ ಮುಖಂಡರು ಹಾಗೂ ಬಿಜೆಪಿ ರಾಷ್ಟ್ರೀಯ ವರಿಷ್ಠರು ರಾಜ್ಯದ ನಾಯಕರಿಂದ ಮಾಹಿತಿ ಪಡೆದಿದ್ದು ಅಡಳಿತಾರೂಢ ಕಮಲ ಪಾಳಯದಲ್ಲಿ ತಳಮಳ ಉಂಟುಮಾಡಿದೆ.
ಸದ್ಯದ ಪರಿಸ್ಥಿತಿಯಲ್ಲಿ ಮುಜುಗರದಿಂದ ಪಕ್ಷವು ಪಾರಾಗಲು ರಮೇಶ್ ಜಾರಕಿಹೊಳಿಯವರಿಂದ ರಾಜೀನಾಮೆ ಪಡೆಯುವುದು ಸೂಕ್ತ ಎಂದು ಹೈಕಮಾಂಡ್ ಅಭಿಪ್ರಾಯಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಇಂದು ರಾಜೀನಾಮೆ ಪತ್ರ ಸಲ್ಲಿಸಿದರು.
ತಾವು ಯಾವುದೇ ತಪ್ಪು ಮಾಡಿಲ್ಲ. ತಮ್ಮ ವಿರುದ್ಧ ಷಡ್ಯಂತ್ರ ನಡೆದಿದ್ದು ಪ್ರಕರಣ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದ್ದರು. ತಮ್ಮ ಈ ಆಗ್ರಹವನ್ನು ಜಾರಕಿಹೊಳಿ ಪುನರುಚ್ಛರಿಸಿದ್ದಾರೆ.