ಬೆಂಗಳೂರು: ಪ್ರಜಾಪ್ರಭುತ್ವದ ಉಳಿವು ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ‘ಮತ ಉಳಿಸಿ–ದೇಶ ಉಳಿಸಿ’ ಬೃಹತ್ ಸಮಾವೇಶಕ್ಕೆ ದೇಶದ ಮೂಲೆಮೂಲೆಗಳಿಂದ ಜನರು ಆಗಮಿಸಿದ್ದು, ಈ ಜನಧ್ವನಿ ಪ್ರಜಾಪ್ರಭುತ್ವದ ಹೋರಾಟಕ್ಕೆ ಹೊಸ ಶಕ್ತಿ ತುಂಬಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇಂಡಿಯಾ ಒಕ್ಕೂಟದ ನಾಯಕರ ನೇತೃತ್ವದಲ್ಲಿ ನಡೆದ ಸಮಾವೇಶವು ಜನಶಕ್ತಿಯ ಮಹಾಸಂಗಮವಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಇದು ಕೇವಲ ರಾಜಕೀಯ ಸಮಾವೇಶವಲ್ಲ. ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯಲು, ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ರಕ್ಷಿಸಲು ಜನರು ಒಗ್ಗೂಡಿದ ಐತಿಹಾಸಿಕ ಹೋರಾಟವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸಮಾವೇಶದಲ್ಲಿ ಭಾಗವಹಿಸಿದ ರಾಜ್ಯದ ಸಾವಿರಾರು ಕಾರ್ಯಕರ್ತರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಪದಾಧಿಕಾರಿಗಳು ಹಾಗೂ ಸ್ವಯಂಸೇವಕ ತಂಡಗಳಿಗೆ ಅವರು ವಿಶೇಷ ಕೃತಜ್ಞತೆ ಸಲ್ಲಿಸಿದ್ದಾರೆ.














































































