ಶಿವಮೊಗ್ಗ: ಮತ್ತೆ ರಾಯಣ್ಣ ಬ್ರಿಗೇಡ್ ಆರಂಭಿಸುವ ಸುಳಿವನ್ನು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನೀಡಿದ್ದಾರೆ.
ತುಂಗಾ ನದಿಗೆ ಬಾಗಿನ ಅರ್ಪಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ ಆದರೆ, ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆ ಇದೆ ಎಂದು ತಿಳಿಸಿದರು.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸಿಕ್ಕಿ ಬಿದ್ದಿದ್ದಾರೆ. ಈ ಹಗರಣದಲ್ಲಿ ಸಿಎಂ ಕುಟುಂಬದವರು ಭಾಗಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತಕ್ಷಣ ರಾಜೀನಾಮೆ ನೀಡಬೇಕು ಹಾಗೂ ಈ ಬಗ್ಗೆ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಈಶ್ವರಪ್ಪ ಒತ್ತಾಯಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಿನ್ನೆಲೆಯಲ್ಲಿ ಶಾಸಕರಾದ ನಾಗೇಂದ್ರ, ಬಸವರಾಜ ದದ್ದಲ್ ವಿರುದ್ದವೂ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.