ದೆಹಲಿ: ಕೆಂಪು ಕೋಟೆಗೆ ಲಗ್ಗೆ ಹಾಕಿದ ಪ್ರಕರಣ ಹಾಗೂ ರೈತರ ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿನ ಹಿಂಸಾಚಾರ ಸಂಬಂಧಿಸಿದಂತೆ ದೆಹಲಿ ಪೊಲೀಸರು 15ಕ್ಕೂ ಹೆಚ್ಚು ಎಫ್ ಐಆರ್ ಗಳನ್ನು ದಾಖಲಿಸಿಕೊಡಿದ್ದಾರೆ.
ದೆಹಲಿ ಪೂರ್ವ ಜಿಲ್ಲೆಯಲ್ಲಿ ಮೂರು, ದ್ವಾರಕದಲ್ಲಿ ಮೂರು ಹಾಗೂ ಶಹದಾರ ಜಿಲ್ಲೆಯಲ್ಲಿ ಒಂದು ಎಫ್ ಐಆರ್, ಹೀಗೆ ಹಲವಡೆ ಎಫ್ ಐಆರ್ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರ ದೂರುಗಳನ್ನಾಧರಿಸಿ ಈ ಪ್ರಕರಣಗಳ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಣರಾಜ್ಯ ದಿಂಡದಂದು ಸಾವಿರಾರು ರೈತರು ಬ್ಯಾರಿಕೇಡ್ ಮುರಿದು, ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ. ವಾಹನಗಳನ್ನೂ ಹಾನಿಗೊಳಿಸಿ ದಾಂದಲೆ ನಡೆಸಿದ್ದಾರೆ. ಐತಿಹಾಸಿಕ ಕೆಂಪುಕೋಟೆಯಲ್ಲಿ ಧರ್ಮವೊಂದರ ಧ್ವಜವನ್ನು ಹಾರಿಸಿದ್ದಾರೆ. ಈ ಹಿಂಸಾಚಾರದಲ್ಲಿ 86 ಸಿಬ್ಬಂದಿ ಗಾಯಗೊಂಡಿದ್ದಾರೆ. ಅಷ್ಟೇ ಅಲ್ಲ ಐಟಿಒ ಬಳಿ ಟ್ರ್ಯಾಕ್ಟರ್ ಮಗುಚಿ ಬಿದ್ದ ಪರಿಣಾಮ ಒಬ್ಬ ಸಾವನ್ನಪ್ಪಿದ್ದಾನೆ. ಈ ಎಲ್ಲಾ ಘಟನೆಗಳ ಹಿನ್ನೆಲೆಯಲ್ಲಿ ಪೊಲೀಸರು ಸಾಲು ಸಾಲು ಪ್ರಕರಣಗಳನ್ನು ದಾಖಲಿಸಿದ್ದಾರೆ.



















































