ತುಮಕೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ
ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ. ರೇಣುಕಾಚಾರ್ಯ ಇಂದು ಶ್ರೀ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಹಳ ದಿನಗಳವರೆಗೂ ಸಿದ್ಧಗಂಗಾ ಮಠಕ್ಕೆ ಬೇಟಿ ನೀಡಿರಲಿಲ್ಲ. ಈಗ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದಿದ್ದೇನೆ ಎಂದರು.
ನಮ್ಮ ಹೊನ್ನಾಳಿ ಕೆರೆಗಳ ಅಭಿವೃದ್ಧಿಗೆ ಸುಮಾರು 800 ಕೋಟಿ ಹಣವನ್ನು ಕೊಟ್ಟಿದ್ದ ಹಿನ್ನೆಲೆಯಲ್ಲಿ ಬೆಳಿಗ್ಗೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಕೋವಿಡ್ ಎರಡನೇ ಅಲೆ ನಿಯಂತ್ರಣದಲ್ಲಿ ನನ್ನನ್ನು ನಾನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದೇನೆ. ನನ್ನ ಜನರ ರಕ್ಷಣೆಗಾಗಿ ಮತ್ತು ಅವರನ್ನು ಕೊರೋನಾದಿಂದ ಮುಕ್ತಿ ಮಾಡಲು ಸಂಕಲ್ಪ ಮಾಡಿ ಕೆಲಸ ಮಾಡಿದ್ದೇನೆ. ಆರೋಗ್ಯ ತಜ್ಞರ ಅಭಿಪ್ರಾಯದಂತೆ ಮೂರನೇ ಅಲೆ ಬರುವ ನಿರೀಕ್ಷೆಯಿದೆ. ಆದರೆ ಮೂರನೇ ಅಲೆ ಬಾರದಿರಲಿ ಎಂದು ಅಭಿಪ್ರಾಯಪಟ್ಟರು.






















































