ದೆಹಲಿ: ರಾಷ್ಟ್ರ ರಾಜಧಾನಿಯಲ್ಲಿನ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ‘ನಾರೀ ಶಕ್ತಿ’ ಎಲ್ಲರ ಕುತೂಹಲದ ಕೇಂದ್ರಬಿಂದುವಾಯಿತು.
ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ, ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರ ಸಾಧನೆಯನ್ನು ಈ ಸ್ತಬ್ಧಚಿತ್ರ ಅನಾವರಣಗೊಳಿಸಿತು.
ಗಣರಾಜ್ಯೋತ್ಸವ ಪರೇಡ್‌ನಲ್ಲಿ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳ ನಡುವೆ ಕುನಾಡಿನ “ನಾರಿ ಶಕ್ತಿ” ಸ್ತಬ್ಧ ಚಿತ್ರ ಸ್ಫೂರ್ತಿಯ ಸೆಳೆಯಂತಿತ್ತು. ಈ ಬಗ್ಗೆ ಟ್ವೀಟ್ ಮೂಲಕ ವೀಡಿಯೋ ಹಂಚಿಕೊಂಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಈ “ನಾರಿ ಶಕ್ತಿ” ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿತು ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಎಲೆಮರೆಯ ಮಹಿಳಾ ಸಾಧಕರ ಪ್ರತೀಕವಾಗಿ ಸೂಲಗಿತ್ತಿ ನರಸಮ್ಮ,ವೃಕ್ಷ ಮಾತೆ ತುಳಸಿ ಗೌಡ ಹಾಲಕ್ಕಿ ಹಾಗೂ ಸಾಲು ಮರದ ತಿಮ್ಮಕ್ಕರನ್ನೊಳಗೊಂಡ "ನಾರಿ ಶಕ್ತಿ" ಸ್ತಬ್ಧ ಚಿತ್ರ ನವ ದೆಹಲಿಯ ಕರ್ತವ್ಯ ಪಥದಲ್ಲಿ ವಿಜೃಂಭಿಸಿದೆ.#RepublicDay #74thRepublicDay #KartavyaPath pic.twitter.com/sGcX5YnPr7
— Basavaraj S Bommai (Modi Ka Parivar) (@BSBommai) January 26, 2023