ಮುಂಬಯಿ: ದೇಶಾದ್ಯಂತ ಗಣರಾಜ್ಯೋತ್ಸವವನ್ನು ರಾಷ್ಟ್ರಭಕ್ತಿಯ ಪ್ರತೀಕವಾಗಿ ಆಚರಿಸಲಾಗುತ್ತಿದೆ. ಮಹಾರಾಷ್ಟ್ರದ ಭಿವಂಡಿಯಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಸಂಘಚಾಲಕ್ ಡಾ.ಭಾಗವತ್ ಭಾಗವಹಿಸಿದರು.
ಭಿವಂಡಿಯಲ್ಲಿರುವ ಪದ್ಮಶ್ರೀ ಅಣ್ಣಾಸಾಹೇಬ್ ಜಾಧವ್ ವಿದ್ಯಾಲಯದಲ್ಲಿ ಆರ್‌ಎಸ್‌ಎಸ್ ಸಾರಸಂಘಚಾಲಕ್ ಡಾ.ಮೋಹನ್ ಭಾಗವತ್ ಅವರು ಗಣರಾಜ್ಯೋತ್ಸವದ ಸಂದರ್ಭದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿದರು.
ವಿವಿಧ ಸಂಘಟನೆಗಳ ಪ್ರಮುಖರು, ಶಿಕ್ಷಣ ತಜ್ಞರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.