ಬೆಂಗಳೂರು; ವಿವಿಧ ಸಮುದಾಯಗಳ ಮೀಸಲಾತಿ ಹೋರಾಟದಿಂದ ಎದುರಾಗಿರುವ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ ಹರಸಾಹಸ ನಡೆಸುತ್ತಿದೆ. ಈ ಸಂಬಂಧ ಸಚಿವ ಸಹೋದ್ಯೋಗಿಗಳ ಸಲಹೆಯಂತೆ ಸಿಎಂ ಯಡಿಯೂರಪ್ಪ ಅವರು ಸಮಿತಿಯೊಂದನ್ನು ರಚಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿ ಮಹತ್ವದ ಸಂಗತಿಯನ್ನು ಹಂಚಿಕೊಂಡಿದ್ದಾರೆ. ಸಚಿವ ಸಂಪುಟದ ತೀರ್ಮಾನದಂತೆ, ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕವಾಗಿ ಹಾಗು ಕಾನೂನಾತ್ಮಕ ಚೌಕಟ್ಟಿನಲ್ಲಿ ಪರೀಶೀಲಿಸಲು ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿ ರವರ ಅಧ್ಯಕ್ಷತೆಯಲ್ಲಿ, ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಮತ್ತು ಮೈಸೂರು ಮಹಾರಾಣಿ ಕಲಾ ಕಾಲೇಜಿನ ಸಹ ಪ್ರಾಧ್ಯಾಪಕ ಡಾ|| ಬಿ.ವಿ.ವಸಂತಕುಮಾರ್ ಸದಸ್ಯರಾಗಿರುವ ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗಿದೆ ಎಂದವರು ತಿಳಿಸಿದ್ದಾರೆ.
ಸಚಿವ ಸಂಪುಟದ ತೀರ್ಮಾನದಂತೆ, ಮೀಸಲಾತಿ ಬಗ್ಗೆ ಇರುವ ವಿವಿಧ ಬೇಡಿಕೆಗಳನ್ನು ಸಂವಿಧಾನಾತ್ಮಕವಾಗಿ ಹಾಗು ಕಾನೂನಾತ್ಮಕ ಚೌಕಟ್ಟಿನಲ್ಲಿ ಪರೀಶೀಲಿಸಲು ಹೈಕೋರ್ಟಿನ ನಿವೃತ್ತ ನ್ಯಾಯಾಧೀಶರಾದ ಸುಭಾಷ್ ಆಡಿ ರವರ ಅಧ್ಯಕ್ಷತೆಯಲ್ಲಿ, ನಿವೃತ್ತ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ ಮತ್ತು… (1/2)
— CM of Karnataka (@CMofKarnataka) March 10, 2021