ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಸಂಬಂಧ ರಾಜ್ಯದಲ್ಲಿ ವಿವಿಧ ಸಮುದಾಯಗಳಿಂದ ನಡೆಯುತ್ತಿರುವ ವಿಚಾರದಲ್ಲಿ ಆಡಳಿತಾರೂಢ ಬಿಜೆಪಿ ಹಾಗೂ ಪ್ರತಿಪಕ್ಷ ಕಾಂಗ್ರೆಸ್ ನಾಯಕರ ನಡುವಿನ ಆರೋಪ ಪ್ರತ್ಯಾರೋಪಗಳು ತೀವ್ರಗೊಂಡಿದೆ.
ಇದೇ ಸಂದರ್ಭದಲ್ಲಿ, ಈ ಮೀಸಲಾತಿ ಹೋರಾಟ ಕುರಿತಂತೆ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಡಿರುವ ಪ್ರಶ್ನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಪ್ರತೀ ಬಾರಿಯೂ ಆರೆಸ್ಸೆಸ್ ಸಿದ್ದಾಂತವನ್ನು ವಿರೋಧಿಸುತ್ತಿದ್ದ ಸಿದ್ದರಾಮಯ್ಯ ಅವರು ಇದೀಗ ಸಂಘದ ದ್ಯೇಯೋದ್ದೇಶವನ್ನು ಪರೋಕ್ಷವಾಗಿ ಒಪ್ಪಕೊಂಡರೇ ಎಂಬುದು ಬಿಜೆಪಿ ನಾಯಕರ ವಿಶ್ಲೇಷಣೆ.
ಆರೆಸ್ಸೆಸ್‌ನದ್ದು ಜಾತ್ಯತೀತ ವಾದ?
‘ಜಾತಿಯಿಂದಲೇ ನರಕ, ಧರ್ಮದಿಂದಲೇ ಸ್ವರ್ಗ, ನಾವೆಲ್ಲ ಹಿಂದೂ, ನಾವೆಲ್ಲ ಒಂದು ಎಂದು ಹಿಂದೂ ಸಮಾಜೋತ್ಸವ ನಡೆಸುತ್ತಿದ್ದ ಸಂಘ ಪರಿವಾರ ಈಗ ಯಾಕೆ ಜಾತಿ ಸಮಾವೇಶಗಳಿಗೆ ಪ್ರಾಯೋಜಕತ್ವ ನೀಡುತ್ತಿದೆ? ಯಾರಾದರೂ ಉತ್ತರಿಸುವಿರಾ ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ. https://twitter.com/siddaramaiah/status/1360843962467016705
ಅಷ್ಟೇ ಅಲ್ಲ, ‘ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ? ಮರೆತುಬಿಟ್ಟಿದ್ದರೆ ನೆನಪಿಸಬಯಸುತ್ತೇನೆ: ಕೇಂದ್ರ ಮತ್ತು ರಾಜ್ಯದಲ್ಲಿರುವುದು ಭಾರತೀಯ ಜನತಾ ಪಕ್ಷದ ಸರ್ಕಾರ. ಹೀಗಿರುವಾಗ ಹೋರಾಟ ಯಾರ ವಿರುದ್ದ’ ಎಂದು ಸಿದ್ದರಾಮಯ್ಯರ ಟ್ವೀಟ್ ಮಾಡಿದ್ದಾರೆ.
ಇದೇ ವೇಳೆ, ಈಗಿನ ಮೀಸಲಾತಿ ಬದಲಾವಣೆ-ಹೆಚ್ಚಳದ ಬೇಡಿಕೆಗೆ ತಮಿಳುನಾಡಿನ ಮಾದರಿಯಲ್ಲಿ ಕರ್ನಾಟಕದ ಮೀಸಲಾತಿಯನ್ನು ಶೇಕಡಾ 73ಕ್ಕೆ ಹೆಚ್ಚಿಸಬೇಕೆಂದು ಕಾಂಗ್ರೆಸ್ ಸರ್ಕಾರವೇ ಮಾಡಿರುವ ಕಾನೂನು ಮಾತ್ರ ಪರಿಹಾರ. ಅದರ ಅನುಷ್ಠಾನ ಕೇಂದ್ರದ ಮೋದಿ ಅವರ ಕೈಯಲ್ಲಿದೆ ಎಂಬುದು ಸಿದ್ದರಾಮಯ್ಯರ ವಾದ. https://twitter.com/siddaramaiah/status/1360844297793204226