ಬೆಂಗಳೂರು: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಪಲ್ಲವಿಯನ್ನು ಪೊಲೀಸರು ಬಂಧಿಸಿದ್ದಾರೆ.
ಭಾನುವಾರ ಓಂ ಪ್ರಕಾಶ್ ಅವರ ಕೊಲೆ ನಡೆದಿದ್ದು, ಅವರ ಪುತ್ರ ದೂರು ನೀಡಿದ್ದರು. ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ಪೊಲೀಸರು ಪತ್ನಿ ಪಲ್ಲವಿ ಹಾಗೂ ಮಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಗುರಿಪಡಿಸಿದ್ದರು. ಬಳಿಕ ಹೇಳಿಕೆ ಪಡೆದು ಓಂ ಪ್ರಕಾಶ್ ಪಲ್ಲವಿ ಪಲ್ಲವಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಈ ನಡುವೆ, ಓಂ ಪ್ರಕಾಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಲ್ಲವಿ, ಪುತ್ರಿ ಕೃತಿ, ಪುತ್ರ ಕಾರ್ತಿಕೇಶ್ ಸೇರಿದಂತೆ ಕುಟುಂಬದ ಹಲವರಿಂದ ಪೊಲೀಸರು ಹೇಳಿಕೆ ಪಡೆದಿದ್ದಾರೆ. ವಿಚಾರಣೆ ಸಂದರ್ಭದಲ್ಲಿ ಹೇಳಿಕೆ ನೀಡಿರುವ ಪತ್ನಿ ಪಲ್ಲವಿ, ತಾನು ಆತ್ಮ ರಕ್ಷಣೆಗಾಗಿ ಕೊಲೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ ಎನ್ನಲಾಗಿದೆ.