ದೆಹಲಿ : ಟ್ರಸ್ಟ್ ಹೆಸರಿನಲ್ಲಿ ಗೋಲ್ ನಡೆಸಿದ ಆರೋಪದಲ್ಲಿ ಸೋನಿಯಾ, ರಾಹುಲ್ ಗಾಂಧಿ ಸಹಿತ ಕಾಂಗ್ರೆಸ್ ಮುಖಂಡರತ್ತ ಕಾನೂನು ಪ್ರಹಾರ ಆಗುತ್ತಲೇ ಇದೆ. ಇದೇ ಸಂದರ್ಭದಲ್ಲಿ ಗಾಂಧಿ ಕುಟುಂಬಕ್ಕೆ ಕೇಂದ್ರ ಸರ್ಕಾರ ಭಾರೀ ಪ್ರಹಾರ ನೀಡಿದೆ.
ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್‌ನ ಕಾನೂನು ಬಾಹಿರ ನಡೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರವು, ವಿದೇಶಿ ಕೊಡುಗೆ ನಿಯಂತ್ರಣ ಕಾಯ್ದೆ FCRA ಅನುಮತಿಯನ್ನು ರದ್ದುಗೊಳಿಸಿದೆ.
ಗಾಂಧಿ ಕುಟುಂಬ ನಡೆಸುತ್ತಿರುವ ಸರ್ಕಾರೇತರ ಸಂಸ್ಥೆಗಳಲ್ಲಿನ ಅಕ್ರಮಗಳ ಆರೋಪ ಕುರಿತ ತನಿಖೆಗಾಗಿ 2020ರಲ್ಲಿ ಗೃಹ ಸಚಿವಾಲಯವು ರಚಿಸಿದ್ದ ಅಂತರ-ಸಚಿವಾಲಯ ಸಮಿತಿಯ ವಿಚಾರಣಾ ವರದಿಯನ್ನಾಧರಿಸಿ ಈ ಕ್ರಮವನ್ನು ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿದೇಶಿ ಮೂಲಗಳಿಂದ ದೇಣಿಗೆ ಸಂಗ್ರಹಿಸಲು ಈ ಕಾಯ್ದೆ ಅನುಮತಿ ಕಲ್ಪಿಸಿದೆ. ಇದೀಗ FCRA ರದ್ದತಿಯಿಂದ ಈ ಫೌಂಡೇಶನ್‌ಗಳು ಅತಂತ್ರವಾಗಿವೆ. ವಿದೇಶಿ ದೇಣಿಗೆಯಲ್ಲಿ ನಡೆದಿದೆ ಎನ್ನಲಾದ ಆರೋಪದ ಹಿನ್ನೆಲೆಯಲ್ಲಿ FCRA ರದ್ದು ಪಡಿಸುವ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
RGF ಪ್ರಮುಖರು ಇವರು:
ಸೋನಿಯಾ ಗಾಂಧಿ,
ರಾಹುಲ್ ಗಾಂಧಿ,
ಪ್ರಿಯಾಂಕಾ ಗಾಂಧಿ ವಾದ್ರಾ
ಮನಮೋಹನ್ ಸಿಂಗ್,
ಪಿ ಚಿದಂಬರಂ
ಇನ್ನೊಂದೆಡೆ, ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟಬಲ್ ಟ್ರಸ್ಟ್‌ನಲ್ಲಿ ಅಕ್ರಮಗಳು ನಡೆದಿದೆ ಎಂಬ ಕುರಿತ ತನಿಖೆಯನ್ನು ಕೇಂದ್ರ ಸರ್ಕಾರ ಸಿಬಿಐಗೆ ವಹಿಸುವ ಸಾಧ್ಯತೆ ಇದೆ.





















































