ಬೆಂಗಳೂರು: ಜಗದ್ವಿಖ್ಯಾತ ವಿಜ್ಞಾನಿ, ಪದ್ಮವಿಭೂಷಣ ರೊದ್ದಂ ನರಸಿಂಹ ಅವರ ನಿಧನಕ್ಕೆಬ ಮುಖ್ಯಮಂತ್ರಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಏರೋಸ್ಪೇಸ್ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ರೊದ್ದಂ ನರಸಿಂಹ ಅವರ ಕೊಡುಗೆ ಮಹತ್ವಪೂರ್ಣವಾದುದು. ಇಂಗ್ಲಿಷ್, ಕನ್ನಡ ಮತ್ತು ಸಂಸ್ಕೃತ ಭಾಷಾ ಪ್ರವೀಣರಾಗಿದ್ದ ಅವರು ವಿಜ್ಞಾನ ಮತ್ತು ತತ್ವಜ್ಞಾನದ ನಡುವಿನ ಸಂಬಂಧದ ಕುರಿತಂತೆ ರಚಿಸಿದ ಕೃತಿಗಳೂ ಅಷ್ಟೇ ಮಹತ್ವ ಹೊಂದಿದ್ದವು ಎಂದು ಮುಖ್ಯಮಂತ್ರಿಗಳು ಬಣ್ಣಿಸಿದ್ದಾರೆ.
ಅವರ ನಿಧನದಿಂದ ದೇಶ ಶ್ರೇಷ್ಠ ವಿಜ್ಞಾನಿಯೊಬ್ಬರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಭಗವಂತನು ಶಾಂತಿಯನ್ನು ಕರುಣಿಸಲಿ. ಅವರ ಕುಟುಂಬದವರು, ಅಭಿಮಾನಿ ಬಳಗದವರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.