ಮಂಗಳೂರು: ದೃಷ್ಟಿಮಾಂದ್ಯ ಮಕ್ಕಳ ಜೀವನಕ್ಕೊಂದು ದಾರಿದೀಪವಾಗಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ಶಿಕ್ಷಣ ಸಂಸ್ಥೆಯಾದ ರೋಮನ್ ಮತ್ತು ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯು (ಮಂಗಳೂರಿನ ಸೇವಾ ಭಾರತಿಯ ಅಂಗ ಸಂಸ್ಥೆ) ಕಳೆದ 11 ವರ್ಷಗಳಿಂದ ತೊಡಗಿಸಿಕೊಂಡಿದೆ. ಮಂಗಳೂರಿನ ಬಿಜೈ ಸಮೀಪದ ಕೋಟೆಕಣಿಯಲ್ಲಿರವ ಈ ಶಿಕ್ಷಣ ಸಂಸ್ಥೆಯಲ್ಲಿ ಈವರೆಗೆ 30ಕ್ಕೂ ಹೆಚ್ಚು ದೃಷ್ಟಿಮಾಂದ್ಯ ಮಕ್ಕಳು ಈ ವಿಶೇಷ ವಿದ್ಯಾ ಸಂಸ್ಥೆಯಲ್ಲಿ 10ನೇ ತರಗತಿಯನ್ನು ಪೂರೈಸಿ, ಹೆಚ್ಚಿನ ಶಿಕ್ಷಣವನ್ನು ಮುಂದುವರಿಸಿದ್ದಾರೆ.
ಇದೇ ವೇಳೆ, 2021-22 ರ ಶೈಕ್ಷಣಿಕ ವರ್ಷಕ್ಕೆ, 5 ರಿಂದ 16 ವರ್ಷದೊಳಗಿನ ದೃಷ್ಟಿಮಾಂದ್ಯ ಮಕ್ಕಳಿಗೆ, 1 ರಿಂದ 10ನೇ ತರಗತಿಗಳಿಗೆ ಪ್ರವೇಶಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಮಾದರಿ ಶಿಕ್ಷಣ ವ್ಯವಸ್ಥೆ:
ಇಲ್ಲಿ ದೃಷ್ಟಿಮಾಂದ್ಯ ಮಕ್ಕಳಿಗೆ ಇಂಗ್ಲೀಷ್ ಮಾಧ್ಯಮದಲ್ಲಿ ಬೈಲ್ ಲಿಪಿಯೊಂದಿಗೆ
ಕರ್ನಾಟಕ ಸರ್ಕಾರದ ಪಠ್ಯಕ್ರಮದಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಜೊತೆಗೆ, ಕಂಪ್ಯೂಟರ್
ತರಬೇತಿ, ಕರಕುಶಲ ವಸ್ತುಗಳ ತಯಾರಿಕೆ, ಸಂಗೀತ, ದೈನಂದಿನ ಚಟುವಟಿಕೆಗಳ ನಿರ್ವಹಣೆ ಮತ್ತು ಚಲನವಲನ ಕೌಶಲ್ಯಗಳನ್ನು ಕಲಿಸಿ ಕೊಡಲಾಗುವುದು. ಶಿಕ್ಷಣ, ವಸತಿ, ಊಟೋಪಚಾರಗಳನ್ನೂ ಉಚಿತವಾಗಿ ನೀಡಲಾಗುವುದು. ವಸತಿರಹಿತ
ಶಿಕ್ಷಣಕ್ಕೂ ಅವಕಾಶವಿದೆ. ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.
ಆಸಕ್ತ ದೃಷ್ಟಿಮಾಂದ್ಯ ಮಕ್ಕಳ ಪೋಷಕರು ಈ ಕೆಳಕಂಡ ವಿಳಾಸವನ್ನು ಸಂಪರ್ಕಿಸಬಹುದೆಂದು ರೋಮನ್ ಕ್ಯಾಥರಿನ್ ಲೋಬೊ ದೃಷ್ಟಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ಪ್ರಕಟಣೆ ತಿಳಿಸಿದೆ.
ಸುಧೀರ್ ಬಾಳಿಗಾ (9480433551), ವಿನೋದ್ ಶೆಣೈ (9880543918) ಹಾಗೂ ಗಜಾನನ ಪೈ- (9448454184) ಅವರನ್ನು ಸಂಪರ್ಕಿಸಬಹುದೆಂದು ಶಿಕ್ಷಣ ಸಂಸ್ಥೆಯ ಪ್ರಮುಖರು ತಿಳಿಸಿದ್ದಾರೆ.