ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದಲ್ಲಿ ಮಾಜಿ ಶಾಸಕ ರೋಷನ್ ಬೇಗ್ ಅವರನ್ನು ಸಿಬಿಐ ಬಂಧಿಸಿದೆ.
ಐಎಂಎಯಿಂದ ಹೂಡಿಕೆದಾರರಿಗೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ರೋಷನ್ ಬೇಗ್ ಅವರ ಹೆಸರು ಕೇಳಿಬಂದಿತ್ತು. ಐಎಂಎ ಅಧ್ಯಕ್ಷ ಮನ್ಸೂರ್ ಖಾನ್ ನಿಂದ ನೂರಾರು ಕೋಟಿ ರೂಪಾಯಿಯನ್ನು ರೋಷನ್ ಬೇಗ್ ಪಡೆದುಕೊಂಡಿದ್ದಾರೆ ಎಂಬ ಆರೋಪವಿದೆ. ಹಣವಷ್ಟೇ ಅಲ್ಲ, ಐಷಾರಾಮಿ ಕಾರುಗಳೂ ಸೇರಿದಂತೆ ಇನ್ನಿತರ ದುಬಾರಿ ಬೆಲೆಯ ಉಡುಗೊರೆಗಳನ್ನೂ ರೋಷನ್ ಬೇಗ್ ಪಡೆದಿದ್ದಾರೆ ಎಂಬ ಆರೋಪವಿದೆ.
ಪ್ರಮುಖ ಆರೋಪಿ ಮನ್ಸೂರ್ ಖಾನ್ ಹೇಳಿಕೆ ಆಧರಿಸಿ ಭಾನುವಾರ ರೋಷನ್ ಬೇಗ್ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಸುದೀರ್ಘ ವಿಚಾರಣೆ ನಡೆದಿದ ಅಧಿಕಾರಿಗಳು ಬಳಿಕ ಬಂಧಿಸಿದರು.
ಈ ಪ್ರಕರಣದಲ್ಲಿ ತಮ್ಮ ಮೇಲೆ ಆರೋಪ ಬಂದ ಕೂಡಲೇ ಶಿವಾಜಿನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರೋಷನ್ ಬೇಗ್, ಬಳಿಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಲು ನಿರ್ಧರಿಸಿದ್ದರು. ಆದರೆ ಉಪಚುನಾವಣೆಯಲ್ಲಿ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು.