ಬೆಂಗಳೂರು: ಪಾಪರ್ ಆಗಿರುವ ಕಾಂಗ್ರೆಸ್ ಸರ್ಕಾರ ಬಿಡಿಎ ಆಸ್ತಿಗಳ ಮಾರಾಟಕ್ಕೆ ಮುಂದಾಗಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಆಓಕ್, ಬಿಬಿಎಂಪಿ ಹಾಗೂ ಜಲಮಂಡಳಿಯ ಆಸ್ತಿಗಳನ್ನು ಕೂಡ ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ. ರಾಜ್ಯದ ಆರ್ಥಿಕ ಶಿಸ್ತನ್ನು ಸರ್ವನಾಶ ಮಾಡಿದ್ದಾರೆ. ಇನ್ನೂ ಒಂದು ವರ್ಷದಲ್ಲಿ ವಿಧಾನಸೌಧವನ್ನೂ ಅಡಮಾನ ಇಡುತ್ತಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ದ ಕಿಡಿಕಾರಿದರು.
ಸರ್ಕಾರಿ ನೌಕರರು ಮತ ನೀಡಿಲ್ಲವೆಂಬ ಕಾರಣಕ್ಕೆ ವೇತನ ಹೆಚ್ಚಿಸಿಲ್ಲ. 7 ನೇ ವೇತನ ಆಯೋಗದ ವರದಿ ಜಾರಿ ‘ನಾಳೆ ಬಾ’ ಎಂಬ ಸ್ಥಿತಿಗೆ ಬಂದಿದೆ. 143 ಶಾಸಕರ ಕ್ಷೇತ್ರದಲ್ಲಿ ಬಿಜೆಪಿಗೆ ಹೆಚ್ಚು ಮತ ಬಂದಿದೆ. ಅದಕ್ಕಾಗಿ ತೈಲ ದರ ಏರಿಸಿದ್ದಾರೆ. ಇದರಿಂದ ಕಾಂಗ್ರೆಸ್ ಶಾಸಕರು ಕೂಡ ಬೇಸರಗೊಂಡಿದ್ದಾರೆ. ಜಿಲ್ಲಾ ಪಂಚಾಯತ್ ಹಾಗೂ ಬಿಬಿಎಂಪಿ ಚುನಾವಣೆಯಲ್ಲಿ ಜನರು ಕಾಂಗ್ರೆಸ್ಗೆ ಪಾಠ ಕಲಿಸಲಿದ್ದಾರೆ ಎಂದರು.